2024-12-24 07:27:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಪದಕ ವಿಜೇತೆ ಮನು ಭಾಕರ್‌

ಪ್ಯಾರಿಸ್‌: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾರತೀಯರ ಮನಗೆದ್ದ ಮನು ಭಾಕರ್ ಇದೀಗ ಭಾರತದ ರಾಷ್ಟ್ರಗೀತೆಯನ್ನು ವಯಲಿನ್‌ ಮೂಲಕ ನುಡಿಸಿ ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದಿದ್ದಾರೆ. ಈ ವಿಡಿಯೊ ಇದೀಗ ಸಾಕಷ್ಟು ವೈರಲ್ ಆಗಿದೆ.

ಈ ವೈರಲ್ ವಿಡಿಯೊದಲ್ಲಿ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯಲಿನ್‌ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವರದಿಯಾದ ಪ್ರಕಾರ ಮನು ಕಂಚಿನ ಪದಕ ಗೆದ್ದ ಬಳಿಕ ವಯಲಿನ್‌ ನಡಿಸಿದ್ದು ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆಯುವ 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ(Paris Olympics) ಸರಬ್ಜೊತ್‌ ಸಿಂಗ್‌ ಜತೆ ಕಂಚಿನ ಪದಕದ ಪ್ಲೇ ಆಫ್ ಸುತ್ತಿನಲ್ಲಿ ಮನು ಕಣಕ್ಕಿಳಿಯಲಿದ್ದಾರೆ. ಭಾರತದ ಈ ಜೋಡಿ ಕೊರಿಯಾದ ಒಹ್‌ ಯೆ ಜಿನ್‌-ಲೀ ವೊನ್ಹೊ ವಿರುದ್ಧ ಸ್ಪರ್ಧೆಗೆ ಇಳಿಯಲಿದ್ದಾರೆ.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಇದು ಅವರ ಪಾದಾರ್ಪಣ ಒಲಿಂಪಿಕ್ಸ್​ ಕೂಟವಾಗಿತ್ತು. ಆಗ ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಅಂದಿನ ನಿರಾಸೆಯನ್ನು ಈ ಬಾರಿ ಪ್ಯಾರಿಸ್​ನಲ್ಲಿ ಪದಕ ಗೆಲ್ಲುವ ಮೂಲಕ ನೀಗಿಸಿಕೊಂಡರು.

ಹರಿಯಾಣದ 22 ವರ್ಷದ ಮನು ಭಾಕರ್​ ಕಳೆದ ಅರ್ಹತಾ ಸುತ್ತಿನಲ್ಲಿ ಒಟ್ಟು 580 ಅಂಕ ಕಲೆ ಹಾಕಿ 3ನೇ ಸ್ಥಾನದೊಂದಿಗೆ ಫೈನಲ್​ಗೆ ಪ್ರವೇಶಿಸಿದ್ದರು. ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

Post a comment

No Reviews