2024-12-24 06:37:05

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

ಪ್ಯಾರಿಸ್‌  : ಭಾನುವಾರ 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಶೂಟರ್​ ಮನು ಭಾಕರ್‌ ಇದೀಗ ಮತ್ತೊಂದು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಮಂಗಳವಾರ ನಡೆದ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಜತೆಗೂಡಿ ಮನು ಭಾಕರ್​ ಕಂಚಿನ ಪದಕ ಗೆಲ್ಲುವ ಮೂಲಕ  ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ಐತಿಹಾಸಿಕ ಸಾಧನೆಗೆ ಪಾತ್ರರಾಗಿದ್ದಾರೆ.

ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ.

22 ವರ್ಷದ ಮನು ಭಾಕರ್ ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳ ಪಟ್ಟಿಯಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು. ಇದೀಗ ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಒಂದಲ್ಲ 2 ಪದಕ ಗೆದ್ದು ತಮ್ಮ ಮೇಲಿಟ್ಟ ನಿರೀಕ್ಷೆಯನ್ನುಉಳಿಸಿಕೂಂಡಿದ್ದಾರೆ.

Post a comment

No Reviews