
ʼಮಾರ್ಟಿನ್’ ಟ್ರೇಲರ್ ಅನಾವರಣ ಆಗಿದೆ ಇಡೀ ಸಿನಿಮಾ ಹೇಗೆ ಮೂಡಿಬಂದಿದೆ ಎಂಬುದರ ಝಲಕ್ ತೋರಿಸುವ ರೀತಿಯಲ್ಲಿ ಟ್ರೇಲರ್ ಸಿದ್ಧವಾಗಿದೆ. ಈ ಚಿತ್ರಕ್ಕೆ ಅರ್ಜುನ್ ಸರ್ಜಾ ಅವರು ಕಥೆ ಬರೆದಿದ್ದಾರೆ ಅನ್ನೋದು ವಿಶೇಷ. ಹೀಗಾಗಿ ಅವರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಹಲವು ಭಾಷೆಗಳಲ್ಲಿ ಮಾತನಾಡಿ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ್ದಾರೆ.
ಅರ್ಜುನ್ ಸರ್ಜಾ ಅವರು ಕಳೆದ ಹಲವು ವರ್ಷಗಳಿಂದ ದಕ್ಷಿಣ ಭಾರತದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಭಾಷೆಗಳಲ್ಲಿ ನಟಿಸಿರುವುದರಿಂದ ಎಲ್ಲಾ ಭಾಷೆಗಳ ಪರಿಚಯ ಅವರಿಗಿದೆ. ‘ಮಾರ್ಟಿನ್’ ಸಿನಿಮಾ ಚಿತ್ರದ ಟ್ರೇಲರ್ ಮುಂಬೈನಲ್ಲಿ ಅದ್ಧೂರಿಯಾಗಿ ನಡೆದಿದ್ದು. ಅರ್ಜುನ್ ಸರ್ಜಾ ‘ಮಾರ್ಟಿನ್’ ಚಿತ್ರಕ್ಕೆ ಕಥೆ ಬರೆದಿದ್ದಾರೆ ಎನ್ನುವುದೆ ವಿಶೇಷವಾಗಿದೆ. ಹೀಗಾಗಿ ಅವರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಆರು ಭಾಷೆಗಳಲ್ಲಿ ಮಾತನಾಡಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಎಲ್ಲರನ್ನೂ ಸ್ವಾಗತಿಸಿದ್ದಾರೆ.
Poll (Public Option)

Post a comment
Log in to write reviews