
ಬೆಂಗಳೂರು :ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದಂತ ಸಿದ್ದರಾಮಯ್ಯ ವಿರುದ್ಧ ಪ್ರೋಟೆಸ್ಟ್ ನಡೆಯುತ್ತಿದೆ. ಆದ್ದರಂತೆ ಇದೀಗ ಚಿಕ್ಕಬಳ್ಳಾಪುರದಲ್ಲಿ ಸಹ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಶಿಡ್ಲಘಟ್ಟ ಸರ್ಕಲ್ನಲ್ಲಿ ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರವನ್ನು ಬಿಟ್ಟು ಸಿದ್ದರಾಮಯ್ಯ ತೊಲಗಲಿ ಎಂಬ ಘೋಷ ವಾಕ್ಯದೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ಮುಖಂಡ ಸೀಕಲ್ ಆನಂದ್ ಗೌಡ, ಮಾಜಿ ಶಾಸಕ ರಾಜಣ್ಣ ಸೇರಿದಂತೆ ಮತ್ತಿತ್ತರರು ಹಾಜರಿದ್ದರು.
Poll (Public Option)

Post a comment
Log in to write reviews