
ಚೆನ್ನೈ: ತಮಿಳುನಾಡಿನಿಂದ ಬಿಜೆಪಿ ಸಂಸದರಾಗಿದ್ದ ಮಾಸ್ಟರ್ ಮಾಥನ್ ಅವರು ಶನಿವಾರ ನಿಧನರಾಗಿದ್ದಾರೆ.
91 ವರ್ಷದ ಮಾಥನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಕೋಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ತಮಿಳುನಾಡಿನ ಬಡಗ ಸಮುದಾಯದ ನಾಯಕರೂ ಆಗಿದ್ದ ಮಾಥನ್ ಅವರು ನಿಲಗೀರಿ (ಊಟಿ) ಲೋಕಸಭಾ ಕ್ಷೇತ್ರದಿಂದ ಎರಡು ಭಾರಿ (1998 ಮತ್ತು 1999–2004) ಬಿಜೆಪಿ ಸಂಸದರಾಗಿದ್ದರು.
ತಮಿಳುನಾಡಿನಲ್ಲಿ ಬಿಜೆಪಿ ಕಟ್ಟಲು ಶ್ರಮಿಸಿದ್ದ ಅವರು, ಹೆಂಡತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮಾಥನ್ ನಿಧನಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Poll (Public Option)

Post a comment
Log in to write reviews