ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂಬ ಹೇಳಿಕೆಗೆ ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ ಅವರು, ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆಯವರ ಹೇಳಿಕೆ ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷ ಮತ್ತು ಭಯವನ್ನು ತೋರಿಸುತ್ತದೆ. ಅವರು ತಮ್ಮ ಭಾಷಣದಲ್ಲಿ ಸಂಪೂರ್ಣವಾಗಿ ಅಸಹ್ಯಕರವಾಗಿ ಮಾತನಾಡುವ ಮೂಲಕ ತಮ್ಮ ನಾಯಕರು ಮತ್ತು ತಮ್ಮ ಪಕ್ಷವನ್ನು ಮೀರಿಸಿದ್ದಾರೆ. ಅನಗತ್ಯವಾಗಿ ತಮ್ಮ ವೈಯಕ್ತಿಕ ಆರೋಗ್ಯದ ವಿಷಯಗಳಿಗೆ ಪ್ರಧಾನಿ ಮೋದಿಯನ್ನು ಎಳೆದಿದ್ದಾರೆ ಆದರೂ ಮಲ್ಲಿಕಾರ್ಜುನ್ ಖರ್ಗೆ ಅವರ ಆರೋಗ್ಯಕ್ಕಾಗಿ, ಮೋದಿಯವರು, ನಾನು ಪ್ರಾರ್ಥಿಸುತ್ತೇವೆ. ಖರ್ಗೆ ಅವರು ಹಲವು ವರ್ಷಗಳ ಕಾಲ ಬದುಕಲಿ. 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣವನ್ನು ನೋಡಲು ಅವರು ಬದುಕಲಿ ಎಂದು ಪೋಸ್ಟ್ ಮಾಡಿದ್ದಾರೆ.
Post a comment
Log in to write reviews