
ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ಅಟಲ್ ಬಿಹಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ರಾಜಸ್ಥಾನದ ಲೊಕೇಂದ್ರನಾಥ ಕುಮಾರ್ ಸಿಂಗ್ (22) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಲೊಕೇಂದ್ರನಾಥ ಕುಮಾರ್ ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಸ್ನೇಹಿತರೊಂದಿಗೆ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿ ಬಾಗಿಲು ತೆರೆಯದೇ ಇದ್ದುದರಿಂದ ಅನುಮಾನಗೊಂಡ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದು ಕೊಠಡಿಯೊಳಗೆ ಹೋದಾಗ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಎನೆಂಬುದು ಇನ್ನೂ ತಿಳಿದು ಬಂದಿಲ್ಲ.
Poll (Public Option)

Post a comment
Log in to write reviews