ಭಾರತ
ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಸಿಬಿಐಗೆ ಒಪ್ಪಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿದ್ಯಾರ್ಥಿನಿ, ಕಿರಿಯ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳ ಪೊಲೀಸರಿಗೆ ಗಡುವು ನೀಡಿದ್ದಾರೆ.
ಸೋಮವಾರ ಮತನಾಡಿದ ಅವರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದರು, ಭಾನುವಾರದೊಳಗೆ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ, ನಾವು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುತ್ತೇವೆ ಎಂದಿದ್ದಾರೆ.
ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರಿಂದ ಘಟನೆಯ ಬಗ್ಗೆ ನನಗೆ ತಿಳಿದಾಗ, ತಕ್ಷಣ ಮತ್ತು ಕ್ಷಿಪ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಬ್ಯಾನರ್ಜಿ ಹೇಳಿದ್ದಾರೆ.
ಆಸ್ಪತ್ರೆಯಲ್ಲಿ ನರ್ಸ್ ಗಳು ಮತ್ತು ಭದ್ರತಾ ಸಿಬ್ಬಂದಿ ಇದ್ದರೂ ಘಟನೆ ಹೇಗೆ ನಡೆಯಿತು ಎಂಬುದು ಅರ್ಥವಾಗುತ್ತಿಲ್ಲ. ಪ್ರಕರಣ ಸಂಬಂಧ ತ್ವರಿತ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದರು.
Poll (Public Option)

Post a comment
Log in to write reviews