ಕರ್ನಾಟಕದೆಲ್ಲೆಡೆ ಆರ್ಭಟಿಸುತ್ತಿರುವ ಮಳೆಯಿಂದಾಗಿ ನಿತ್ಯ ಒಂದೊಂದೇ ಹೊಸ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಹೀಗಾಗಿ ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಮಳೆ ಹಾನಿ ಸಂಬಂಧ ಡಿಸಿ, ಸಿಇಒಗಳ ಜತೆ ಸಿಎಂ ಸಭೆ ಮಾಡಿದ್ದು, ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.
ನೆರೆ ಪೀಡಿತ ಪ್ರದೇಶಗಳಿಗೆ ಸ್ವತಃ ಡಿಸಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ತಕ್ಷಣ ಪರಿಹಾರ ನೀಡಬೇಕು. ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಅಕ್ಟೋಬರ್‌ನಿಂದ ಡಿಸೆಂಬರ್ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಮುಖ ಡ್ಯಾಂಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಮುಖ ಡ್ಯಾಂಗಳಲ್ಲಿ ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ನೀರು ಇತ್ತು. ಈ ಬಾರಿ ಜಲವಿದ್ಯುತ್ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಾಗಿದೆ ಎಂದಿದ್ದಾರೆ.
Post a comment
Log in to write reviews