
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಬೆಳಗ್ಗೆಯಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಿರಂತರ ಸುರಿದ ಮಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಅನಾಹುತಗಳು ಸಂಭವಿಸಿದೆ.
ಬೆಂಗಳೂರು ನಗರದಲ್ಲಿ ಇಂದು ಮಾತ್ರವಲ್ಲ ಮುಂದಿನ 72 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ನಾಳೆಯು ಬೆಂಗಳೂರು ನಗರದಾದ್ಯಂತ ಮಳೆಯಾಗುವ ಸಾಧ್ಯತೆ ಇದ್ದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20ರವರೆಗೆ ದಸರಾ ರಜೆ ಇದೆ. ಆದ್ರೆ ನಗರದ ಖಾಸಗಿ ಶಾಲೆಗಳು ಕಳೆದ ಸೋಮವಾರದಿಂದಲೇ ಆರಂಭ ಮಾಡಿವೆ.
ನಗರದಲ್ಲಿ ಇಂದು ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳಿಗೆ ಶಾಲೆಗೆ ಬರಲು ಕಷ್ಟ ಎದುರಾಗಿದೆ. ಹೀಗಾಗಿ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಡಿಸಿ ಜಗದೀಶ್ ಅವರು ಸೂಚನೆ ನೀಡಿದ್ದಾರೆ. ನಾಳೆ ಬೆಂಗಳೂರು ವ್ಯಾಪ್ತಿಯ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ನೀಡಿದೆ.
ನ್ಯೂಸ್ ಫಸ್ಟ್ ಚಾನೆಲ್‌ಗೆ ಬೆಂಗಳೂರು ಡಿಸಿ ಜಗದೀಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆಯೂ ಮಳೆ ಮುಂದುವರೆದ್ರೆ ನಾಡಿದ್ದು ರಜೆ ನೀಡುವ ಬಗ್ಗೆ ನಾಳೆ ಸಂಜೆ ನರ‍್ಧಾರ ಮಾಡಲಾಗುವುದು ಎಂದಿದ್ದಾರೆ.
Poll (Public Option)

Post a comment
Log in to write reviews