
ಬೆಂಗಳೂರು: ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ ನಾಗಸಂದ್ರ ನಿಲ್ದಾಣದವರೆಗೆ ಸೆಪ್ಟೆಂಬರ್ 6 ಮತ್ತು 11ರಂದು ಪೂರ್ಣ ದಿನ ನಮ್ಮ ಮೆಟ್ರೋ ಸೇವೆ ಸ್ಥಗಿತವಾಗಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ವಿಸ್ತರಿಸಲಾದ ಮಾರ್ಗದಲ್ಲಿ ಮೆಟ್ರೋ ಸಿಗ್ನಲಿಂಗ್ ಪರೀಕ್ಷೆ ಹಿನ್ನೆಲೆಯಲ್ಲಿ ಇಡೀ ದಿನ ಟೆಸ್ಟಿಂಗ್ ನಡೆಯಲಿದೆ. ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮುಖ್ಯವಾಗಿ ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಕೈಗೊಳ್ಳಲಾಗುತ್ತಿದೆ. ಹೀಗಾಗಿ, ಕೆಲ ದಿನಗಳು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ತಿಳಿಸಿದೆ.
ಶುಕ್ರವಾರವೂ ಸ್ಥಗಿತಗೊಂಡ ನಮ್ಮ ಮೆಟ್ರೋ: ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರವರೆಗೆ ಮೆಟ್ರೋ ರೈಲು ಸಂಚಾರ ಶುಕ್ರವಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಪರದಾಡಿದರು. ಪ್ರಯಾಣಿಕರು ನಿಲ್ದಾಣಕ್ಕೆ ಬಂದು ವಾಪಸ್ ತೆರಳಿದರು. ಮೆಟ್ರೋ ಸಂಚಾರ ಇಲ್ಲ, ಇದರಿಂದ ಸರಿಯಾದ ಸಮಯಕ್ಕೆ ಆಫೀಸ್‌ಗೆ ಹೋಗಲು ಸಮಸ್ಯೆ ಆಗುತ್ತಿದೆ. ಆಟೋಗಳು ಬುಕ್ ಆಗುತ್ತಿಲ್ಲ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದರು
Poll (Public Option)

Post a comment
Log in to write reviews