2024-12-24 06:03:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೆಟ್ರೋ ಟಿಕೆಟ್ ದರ ಏರಿಕೆ ಸುಳಿವು ಕೊಟ್ಟ ಬಿಎಂಆರ್​ಸಿಎಲ್: ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ಸಾಧ್ಯತೆ

ಬೆಂಗಳೂರು : ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ, ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್​ಡಿ (ಪ್ಲಾಟ್ ಫಾರಂ ಸ್ಕ್ರೀನ್) ಅಳವಡಿಕೆಗೆ ಬಿಎಂಆರ್​​ಸಿಎಲ್ ಮುಂದಾಗಿದೆ. ಹೊಸ ಮಾರ್ಗಗಳಾದ ಗೊಟ್ಟಿಗೆರೆಯಿಂದ ನಾಗವಾರ (ಪಿಂಕ್‌ ಲೈನ್), ಸಿಲ್ಕ್ ಬೋರ್ಡ್​ನಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬ್ಲೂ ಲೈನ್​ನಲ್ಲಿ ಪಿಎಸ್​ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರುಪಾಯಿ ವೆಚ್ಚದಲ್ಲಿ ಗುತ್ತಿಗೆ ನೀಡಲಾಗಿದೆ. ಹೀಗಿರುವಾಗ ಹಳೆಯ ಮೆಟ್ರೋ ಸ್ಟೇಷನ್​ಗಳಿಗೂ ಪಿಎಸ್​ಡಿ ಡೋರ್ ಅಳವಡಿಸಲು ಪ್ರಯಾಣಿಕರ ಒತ್ತಡ ಹೆಚ್ಚಾಗಿದೆ.

ಎಲ್ಲಾ ಮೆಟ್ರೋ ಸ್ಟೇಷನ್​ಗಳಿಗೂ ಪಿಎಸ್​ಡಿ ಅಳವಡಿಸಲು 700 ರಿಂದ 800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಟಿಕೆಟ್ ದರ ಹೆಚ್ಚಿಸುವ ಕುರಿತು ಬಿಎಂಆರ್​ಸಿಎಲ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಬಿಎಂಆರ್​ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಸುಳಿವು ನೀಡಿದ್ದಾರೆ.

ಒಂದು ಮೆಟ್ರೋ ಸ್ಟೇಷನ್​ಗೆ ಪಿಎಸ್​ಡಿ ಅಳವಡಿಸಲು 8 ರಿಂದ 10 ಕೋಟಿ ವೆಚ್ಚವಾಗಲಿದೆ. ಸದ್ಯ ಕಾರ್ಯಾಚರಣೆಯಲ್ಲಿರುವ ಹಸಿರು ಮತ್ತು ನೇರಳೆ ಮಾರ್ಗದ ಎಲ್ಲಾ ಮೆಟ್ರೋ ಸ್ಟೇಷನ್​​ಗಳಿಗೆ ಪಿಎಸ್​ಡಿ ಅಳವಡಿಸಲು ಸುಮಾರು 700 ರಿಂದ 800 ಕೋಟಿ ರೂಪಾಯಿ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಹೀಗಾಗಿ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ.

ಬಿಎಂಆರ್ಸಿಎಲ್ ಚಿಂತನೆಗೆ ಪ್ರಯಾಣಿಕರ ಆಕ್ರೋಶ

ಬ್ಯಾಂಕ್​​​ನಲ್ಲಿ ಸಾಲ ಪಡೆದುಕೊಂಡರೆ ಪ್ರತಿ ತಿಂಗಳು ಬಡ್ಡಿ ಕಟ್ಟಬೇಕಾಗುತ್ತದೆ. ಅದನ್ನು ಪ್ರಯಾಣಿಕರ ಮೇಲೆ ಹೊರೆ ಹಾಕಬೇಕಾಗುತ್ತದೆ. ಹಾಗಾಗಿ ಟಿಕೆಟ್ ದರ ಏರಿಕೆ ಮಾಡಿದರೆ ಪಿಎಸ್​ಡಿಗೆ ಬೇಕಾದ ಹಣ ಹೊಂದಿಸಲು ಸರಿ ಆಗುತ್ತದೆ ಎನ್ನುವುದು ನಮ್ಮ ಮೆಟ್ರೋ ಯೋಚನೆ. ಆದರೆ ಇದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

Post a comment

No Reviews