2024-12-24 06:41:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಾಗಸಂದ್ರ-ಮಾದವಾರ ನಡುವಿನ ಮೆಟ್ರೋ ಸಂಚಾರ ಅತೀ ಶೀಘ್ರದಲ್ಲಿ

ಬೆಂಗಳೂರು:  ನಗರದ ಜನತೆಗೆ ಬಹು ನಿರೀಕ್ಷಿತ ನಾಗಸಂದ್ರದಿಂದ ಮಾದಾವರವರೆಗಿನ ಬಹು ನಿರೀಕ್ಷಿತ ನಮ್ಮ ಮೆಟ್ರೋ ರೈಲು ಸಂಚಾರ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದ್ದು, ನಾಗಸಂದ್ರ ಟು ಮಾದಾವರವರೆಗಿನ 3.7 ಕಿಮೀ ಅಂತರದ ಮೆಟ್ರೋ ಮಾರ್ಗ ಕಾಮಗಾರಿ ಪೂರ್ಣಗೊಂಡಿದ್ದು, ಟ್ರಯಲ್​ ರನ್​ ಕೂಡ ಯಶಸ್ವಿಯಾಗಿದೆ ಎನ್ನಲಾಗಿದೆ.

ಇದೀಗ, ರೈಲ್ವೆ ಸುರಕ್ಷತಾ ಆಯುಕ್ತರು ಅಕ್ಟೋಬರ್ 3 ಮತ್ತು 4 ರಂದು ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗವನ್ನು ಪರಿಶೀಲನೆ ನಡೆಸಿ, ಸಂಚಾರಕ್ಕೆ ಅನುಮತಿ ನೀಡಿದ ಬಳಿಕ ಶೀಘ್ರವೇ ಲೋಕಾರ್ಪಣೆ ದಿನಾಂಕ ಘೋಷಣೆಯಾಗಲಿದೆ.

ನಾಗಸಂದ್ರದಿಂದ ಮಾದಾವರದ ನಡುವಿನ ಮಾರ್ಗದಲ್ಲಿ ಮೂರು ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ. ಹಸಿರು ಮಾರ್ಗ ವಿಸ್ತರಣೆಯಿಂದ ನಗರದ ಪ್ರಮುಖ ಪ್ರದರ್ಶನ ಕೇಂದ್ರವಾದ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (BIEC) ಗೆ ಸಂಪರ್ಕವನ್ನು ಹೊಂದಿದೆ.

ಮಂಜುನಾಥನಗರ, ಚಿಕ್ಕಬಿದರಕಲ್ಲು, ಮಾದಾವರ, ತುಮಕೂರು ರಸ್ತೆ, ಅಂಚೆಪಾಳ್ಯ, ಜಿಂದಾಲ್ ನಗರದ ನಾಗರಿಕರು ಮೆಟ್ರೋದಲ್ಲಿ ಪ್ರಯಾಣಿಸಲು ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಬರಬೇಕಾಗಿತ್ತು, ಈಗ ಈ ಮಾರ್ಗ ಸಂಪೂರ್ಣವಾದ ಬಳಿಕ ಐದು ಕಿಲೋಮೀಟರ್‌ಗಳಷ್ಟು ಪ್ರಯಾಣಿಸುವುದು ತಪ್ಪಲಿದೆ.

2017ರಲ್ಲಿ ನಾಗಸಂದ್ರ-ಮಾದವಾರ ನಡುವಿನ ಕಾಮಗಾರಿ  ಆರಂಭವಾಗಿತ್ತು. 2019ರ ಮಧ್ಯದ ವೇಳೆಗೆ ಅಂದುಕೊಂಡಂತೆ ಎಲ್ಲವೂ ನಡೆದಿದ್ದರೇ  ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೊರೊನಾ ಸಮಸ್ಯೆ ಸೇರಿದಂತೆ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.

 

Post a comment

No Reviews