
ಬೆಂಗಳೂರು: ಅನೇಕ ಗುತ್ತಿದಾರರು ಹಾಗು ಅಧಿಕಾರಿಗಳ ಜೀವದ ಜೊತೆ ಆಟವಾಡಿದ್ದ ಹಿಂದಿನ 40% ಕಮಿಷನ್ ಸರ್ಕಾರದ ಚಾಳಿಯನ್ನೇ ಈಗಿನ ಕಾಂಗ್ರೆಸ್ ಸರ್ಕಾರವೂ ಮೈಗೂಡಿಸಿಕೊಂಡಂತಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ಮೊತ್ತದ ಅವ್ಯವಹಾರಕ್ಕೆ ಸಂಬಂಧಿಸಿ ಬೆಂಗಳೂರು ಕಚೇರಿ ಅಧ್ಯಕ್ಷ ಪಿ.ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವುದೇ ಇದಕ್ಕೆ ಸಾಕ್ಷಿ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು.
ಶಿವಮೊಗ್ಗದಲ್ಲಿ, ಅಕೌಂಟೆಂಟ್ ಪಿ.ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಸಂಬಂಧಿಸಿ ಬೆಂಗಳೂರು ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಗದೀಶ್ ವಿ. ಸದಂ, ಡೆತ್‌ನೋಟ್‌ನಲ್ಲಿ ಚಂದ್ರಶೇಖರ್ ಅವರು ನಮೂದಿಸಿರುವ, ಮಂತ್ರಿ ಬಿ.ನಾಗೇಂದ್ರ ರವರನ್ನು ಕೂಡಲೇ ಸಂಪುಟದಿಂದ ಕಿತ್ತುಹಾಕಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಮಂತ್ರಿ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರವು ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ ಎಂಬುದನ್ನು ಎತ್ತಿ ತೋರಿಸುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಾಗ ದಾಖಲೆ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಳುತ್ತಿದ್ದರು. ಇದೀಗ ದಾಖಲೆಯ ಸ್ವರೂಪವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಡೆತ್‌ನೋಟ್ ಇದೆ. ನಿಗಮದ 85 ಕೋಟಿ ರೂ.ಗಳನ್ನು ಅನ್ಯಾಯ ಮತ್ತು ನಿಯಮಬಾಹಿರವಾಗಿ ಲೂಟಿ ಮಾಡಿರುವ ಬಗ್ಗೆಯೂ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಸಚಿವರು ಮೌಕಿಕವಾಗಿ ಆದೇಶ ನೀಡಿದ್ದರೆಂದು ಉಲ್ಲೇಖಿಸಿದ್ದಾರೆ. ಇದೇನು ಕೇವಲ ಬಾಯಿ ಮಾತಿನಲ್ಲೇ ನಡೆಸುವ ಸರ್ಕಾರವಾಗಿದೆಯೇ? ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡುವುದಾಗಿ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯನವರ ಸರ್ಕಾರವೂ, ಕಮಿಷನ್ ಹಾಗೂ ಭ್ರಷ್ಟಾಚಾರದ ಹಾದಿ ಹಿಡಿದಿರುವುದು ವಿಪರ್ಯಾಸ ಎಂದು ಜಗದೀಶ್ ವಿ.ಸದಂ ಬೇಸರ ವ್ಯಕ್ತಪಡಿಸಿದರು.
Poll (Public Option)

Post a comment
Log in to write reviews