ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಅಧಿಕಾರಿಗಳಿಗೆ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ.
ಬೆಂಗಳೂರು: ಕಳೆದ 2023 ಮತ್ತು24 ನೇ ಸಾಲಿನ ಮುಂಗಾರು ಬೆಳೆ ವಿಮೆ ಪರಿಹಾರವನ್ನು ಶೀಘ್ರದಲ್ಲೇ ಇತ್ಯಥ೯ ಮಾಡುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಹಾಗು ರಾಜ್ಯದ ಜಂಟಿ ಕೃಷಿ ನಿದೇ೯ಶಕರೊಂದಿಗೆ ಬರ ನಿವ೯ಹಣೆ ಕ್ರಮಗಳ ಕುರಿತು ವಿಡಿಯೋ ಸಂವಾದ ನಡೆಸಿ ಅಧಿಕಾರಿಗಳಿಗೆ ಬೆಳೆ ವಿಮೆ ಪರಿಹಾರ ಇತ್ಯಥ೯ ಮಾಡಲು ನಿದೇ೯ಶನ ನೀಡಿದರು.
ಇದೇ ಸಂದಭ೯ದಲ್ಲಿ ರಾಜ್ಯಾದ್ಯಂತ ಪೂವ೯ ಮುಂಗಾರು ಉತ್ತಮವಾಗಿದ್ದು ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಈಗಾಗಲೆ ಎಲ್ಲಾ ಜಿಲ್ಲೆಗಳಿಗೂ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲಾಗಿದೆ. ಮೇ, ಜೂನ್ ತಿಂಗಳಿನಲ್ಲಿ ಕೊರತೆ ಮತ್ತು ಹೆಚ್ಚುವರಿ ಬೇಡಿಕೆ ಇದ್ದಲ್ಲಿ ತಕ್ಷಣ ಕೃಷಿ ಆಯುಕ್ತರು, ನಿದೇ೯ಶಕರ ಗಮನಕ್ಕೆ ತರುವಂತೆ ಕೃಷಿ ಸಚಿವರು ಸೂಚನೆ ನೀಡಿದ್ದಾರೆ. ಮತ್ತು ಎಲ್ಲೂ ಅನಗತ್ಯ ನೂಕು ನುಗ್ಗಲು , ಗಲಾಟೆಗಳಾಗಬಾರದು ಸುಗಮ ವಿತರಣೆಗೆ ಯೋಜನೆ ರೂಪಿಸಿ ಎಂದು ಸಚಿವರು ಸಲಹೆ ನೀಡಿದರು.
ರೈತರಿಗೆ ಬಿತ್ತನೆ ರಸಗೊಬ್ಬರ ಅವುಗಳ ಪ್ರಮಾಣೀಕರಗಳ, ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ. ವ್ಯಾಪಕ ಪ್ರಚಾರ ಮಾಡಿ ಎಂದು ಚಲುವರಾಯಸ್ವಾಮಿ ಹೇಳಿದರು.
ಕಳೆದ ವರ್ಷ ಬರ ರೈತರನ್ನು ಕಾಡಿತು. ಈ ವರ್ಷ ಪೂರ್ವ ಮುಂಗಾರು ಚೆನ್ನಾಗಿದೆ .ಮುಂದೆಯೂ ಉತ್ತಮ ಮಳೆ ಮುನ್ಸೂಚನೆ ಇದೆ. ರೈತರು ಸಹಜವಾಗಿ ಉತ್ಸಾಹದಿಂದ ಬಿತ್ತನೆ ಆರಂಭಿಸಿದ್ದಾರೆ. ಹಾಗಾಗಿ ಕೃಷಿಕರಿಗೆ ಅನುಕೂಲ ಕಲ್ಪಿಸಿ ಎಂದು ಅವರು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ. ಮೇ 22ರ ವರದಿಯಂತೆ ಮುಂಗಾರು ಹಂಗಾಮಿಗೆ 5.52 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು 9.01 ಲಕ್ಷ ಕ್ವಿಂಟಾಲ್ ಪೂರೈಕೆ ವ್ಯವಸ್ಥೆ ಮಾಡಲಾಗಿದೆ.
2024ರ ಮುಂಗಾರು ಹಂಗಾಮಿನಲ್ಲಿ 26.80 ಲಕ್ಷ ಮೆಟ್ರಿಕ್ ಟನ್ ವಿವಿಧ ರಾಸಾಯನಿಕ ಗೊಬ್ಬರಗಳ ಬೇಡಿಕೆ ಅಂದಾಜಿಸಲಾಗಿದೆ. ಸಕಾಲದಲ್ಲಿ ಪೂರೈಕೆಗೆ ವ್ಯವಸ್ಥಿತ ಕ್ರಮ ಅನುಸರಿಸಲಾಗುತ್ತಿದೆ.
17.95 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಈಗಾಗಲೇ ಸರಬರಾಜಾಗಿದೆ. ಇಂದಿನ ವರಗೆ 3.05 ಲಕ್ಷ ಮೆಟ್ರಿಕ್ ಟನ್ ಮಾರಾಟವಾಗಿದ್ದು 14.90 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಲಭ್ಯವಿದೆ ಎಂದು ಅಧಿಕಾರಿಗಳು ವಿವರ ಒದಗಿಸಿದರು.
Post a comment
Log in to write reviews