
ಕಲಬುರಗಿ: ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಹೊಟ್ಟೆನೋವಿನಿಂದ ಸಾವನ್ನಪ್ಪಿರುವ ಘಟನೆ ನಗರದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ಸರ್ಫರಾಜ್ ಎಂಬಾತ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸರ್ಫರಾಜ್ ಜೀವ ಬೆದರಿಕೆ ಹಾಕಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದು, ಗರ್ಭಿಣಿಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ.
ಶುಕ್ರವಾರ (ಜೂನ್ 28)ರಂದು ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಬಾಲಕಿಯನ್ನು ಪರೀಕ್ಷಿಸಿ ಗರ್ಭಿಣಿಯಾಗಿರುವುದಾಗಿ ತಿಳಿಸಿದರು. ತೀವ್ರ ಹೊಟ್ಟೆನೋವಿನಿಂದ ಬಾಲಕಿ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಅತ್ಯಾಚಾರ ಎಸಗಿದ ಆರೋಪಿ ಸರ್ಫರಾಜ್ ಮಿರ್ಜಾನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
Poll (Public Option)

Post a comment
Log in to write reviews