ಕರ್ನಾಟಕ
ಶ್ರೀನಿವಾಸ ಪೂಜಾರಿ ಹೆಸರಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆಯಿಟ್ಟ ಕಿಡಿಗೇಡಿಗಳು

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು, ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುರುದ್ದೇಶಪೂರ್ವಕವಾಗಿ ಅಕ್ರಮ ಹಣ ಸಂಪಾದಿಸುವ ಹಾಗೂ ಹೆಸರು ಕೆಡಿಸುವ ಉದ್ದೇಶದಿಂದ ನಕಲಿ ಖಾತೆ ಸೃಷ್ಟಿಸಲಾಗಿದೆ. ಸಂಸದರ ಹೆಸರಿನಲ್ಲಿ ನಕಲಿ ಖಾತೆ ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಕೀಲ ಶ್ಯಾಮಸುಂದರ ನಾಯರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ. ಸೆನ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಂಸದ ಪೂಜಾರಿ ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು, ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಅದರ ಮೂಲಕ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ.
Poll (Public Option)

Post a comment
Log in to write reviews