
ಮುಖ್ಯಮಂತ್ರಿ ಸಿದ್ದರಾಮಯ್ಯ ವಾಹನಕ್ಕೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಾರು ವಿರುದ್ಧ ದಿಕ್ಕಿನಲ್ಲಿ ಬಂದಿರುವಂತಹ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ವೃತ್ತದಲ್ಲಿ ನಡೆದಿದೆ. ಈ ವೇಳೆ ಸ್ವತಃ ಜನಾರ್ದನ ರೆಡ್ಡಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಟ್ರಾಫಿಕ್ ಜಾಮ್ ಹೆಚ್ಚಾಗಿದ್ದರಿಂದ ಜನಾರ್ದನ ರೆಡ್ಡಿ ಕಾರ್ ಚಾಲಕ ಡಿವೈಡರ್ ಹತ್ತಿಸಿದ್ದಾರೆ.
ರಾಯಚೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಇದ್ದ ವಾಹನ ತೆರಳುತ್ತಿದ್ದಾಗ ಸ್ವತಃ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಕೂಡ ವಿರುದ್ಧ ದಿಕ್ಕಿನಲ್ಲಿ ಚಲಿಸಿದ್ದಾರೆ. ಇನ್ನೂ ನಿನ್ನೆ ಸಿಎಂ ಬಂದ ಹಿನ್ನಲ್ಲೆ ಜೀರೊ ಟ್ರಾಪಿಕ್ ಮಾಡಲಾಗಿದ್ದಿ, ಸುಮಾರು 20 ನಿಮಿಷ ಟ್ರಾಫಿಕ್ ಜಾಮ್ ಆಗಿದ್ದರಿಂದ ಡಿವೈಡರ್ ದಾಟಿ ಒನ್ ವೇನಲ್ಲಿ ವಿರುದ್ಧ ದಿಕ್ಕಿಗೆ ರೆಡ್ಡಿ ಚಾಲಕ ಕಾರು ಚಲಾಯಿಸಿದ್ದಾರೆ. ಸ್ವಲ್ಪ ವ್ಯತ್ಯಾಸ ಆಗಿದ್ದರೂ ಭಾರಿ ಅನಾಹುತ ನಡೆಯುತ್ತಿತ್ತು. ಘಟನೆಯಿಂದ ಕೆಲಕಾಲ ಗೊಂದಲದ ಪರಿಸ್ಥಿತಿ ಎದುರಾಗಿತ್ತು.
Poll (Public Option)

Post a comment
Log in to write reviews