
ಗುಜರಾತ್ನ ಅಹಮದಾಬಾದ್ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿ ಇದೇ ಮೊದಲ ಬಾರಿಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
ಪ್ರಧಾನಿ ಮೋದಿಯವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾತ್ ನೀಡಿದರು. ಮಂಗಳವಾರ ಬೆಳಗ್ಗೆ ರಾಜಭವನದಿಂದ ಹೊರಟು ಪ್ರಧಾನಿ ಚಲಾಯಿಸಿದರು. ನಂತರ ಮತದಾನ ಮಾಡಿದ ಶಾಹಿ ತೋರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಧಾನಿ, ಇಂದು ಮೂರನೇ ಹಂತದ ಮತದಾನ ನಡೆಯುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಬೇಕು. ಉತ್ಸಾಹದಲ್ಲಿ ಬಂದು ಮತದಾನ ಮಾಡಬೇಕು. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚು ಉತ್ಸಾಹ ಇದೆ. ಎಲ್ಲ ರೀತಿಯ ವ್ಯವಸ್ಥೆಯನ್ನು ಆಯೋಗ ಮಾಡಿದೆ. ಆಯೋಗ ಪ್ರಶಂಸೆಗೆ ಅರ್ಹ. ಗುಜರಾತ್ ಎಲ್ಲಿಲ್ಲಿ ಮತದಾನ ಇದೆ, ಜನರು ಹೆಚ್ಚು ಮತದಾನ ಮಾಡಿ. ಚುನಾವಣೆಯನ್ನು ಉತ್ಸವ ರೀತಿಯಲ್ಲಿ ಆಚರಿಸಿ ಎಂದು ಜನತೆಗೆ ಕರೆ ನೀಡಿದರು.
Poll (Public Option)

Post a comment
Log in to write reviews