
ಒಡಿಶಾ: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಒಡಿಶಾ ರಾಜ್ಯಪಾಲ ರಘುಬರ್ ದಾಸ್, ಮುಖ್ಯಮಂತ್ರಿಯಾಗಿ ಆಯ್ಕೆಯಾದ ಮೋಹನ್ ಚರಣ್ ಮಾಝಿಗೆ ಪ್ರಮಾಣ ವಚನ ಬೋಧಿಸಿದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಹೀನಾಯ ಸೋಲು ಕಂಡಿದ್ದರು. ಈ ಮೂಲಕ ಬಿಜೆಡಿಯ 24 ವರ್ಷಗಳ ಅಧಿಕಾರಾವಧಿ ಕೊನೆಗೊಂಡಿದೆ. ಭರ್ಜರಿ ಗೆಲುವು ದಾಖಲಿಸಿ ಅಧಿಕಾರ ಪಡೆದುಕೊಂಡ ಬಿಜೆಪಿ ಪಕ್ಷದಿಂದ ಮೋಹನ್ ಚರಣ್ ಮಾಝಿ ಮೊದಲ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Poll (Public Option)

Post a comment
Log in to write reviews