
ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಕೂಳೂರಿನ ಮತ್ತೊಂದು ಸೇತುವೆ ಬಳಿ ಇಂದು ನೀರಿನಲ್ಲಿ ವ್ಯಕ್ತಿಯೊಬ್ಬರ ತಲೆ ಕಾಣುತ್ತಿತ್ತು. ಸಮೀಪಕ್ಕೆ ತೆರಳಿದಾಗ ಇದು ಮುಮ್ತಾಜ್ ಅಲಿ ಅವರ ದೇಹ ಎನ್ನುವುದು ಖಚಿತವಾಗಿದೆ.
ಸದ್ಯ ಫಲ್ಗುಣಿ ನದಿಯ ನೀರಿನಿಂದ ಶವವನ್ನು ಹೊರಕ್ಕೆ ತೆಗೆಯಲಾಗಿದ್ದು, ಮುಮ್ತಾಜ್ ಅಲಿ ಅವರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.
53 ವರ್ಷದ ಮುಮ್ತಾಜ್ ಅಲಿ ನಿನ್ನೆ ಬೆಳಗ್ಗೆ ದಿಢೀರ್ ನಾಪತ್ತೆಯಾಗಿದ್ದರು. ಕೂಳೂರಿನ ಸೇತುವೆ ಬಳಿ ಅಪಘಾತ ನಡೆದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿತ್ತು. ಇದು ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು. ಮುಮ್ತಾಜ್ ಅಲಿ ಫಿಶ್ಮಿಲ್ , ಕಾಲೇಜು ಸೇರಿದಂತೆ ಹಲವು ಉದ್ಯಮ ನಡೆಸಿಕೊಂಡಿದ್ದರು. ಇನ್ನೂ ಕಳೆದ ಕೆಲ ದಿನಗಳಿಂದ ಮುಮ್ತಾಜ್ ಅಲಿ ಮಾನಸಿಕವಾಗಿ ನೊಂದಿದ್ದರು ಎಂದು ಮಾಹಿತಿ ಸಿಕ್ಕಿದೆ.
Poll (Public Option)

Post a comment
Log in to write reviews