
ಬೆಂಗಳೂರು: ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಬಿಬಿಎಂಪಿಯ ಒಂಬತ್ತು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
ಕೊರೊನಾ ಸಮಯದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಕೋ ಆಪರೇಟಿವ್ ಸೊಸೈಟಿ, ಸಹಕಾರಿ ಸಂಘಗಳಿಗೆ ಕೋಟಿ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಈ ಅಕ್ರಮ ಹಣ ವರ್ಗಾವಣೆಯಲ್ಲಿ ಹಣಕಾಸು ವಿಭಾಗದ ಒಂಬತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆಂದು ಆರೋಪ ಮಾಡಲಾಗಿದೆ. ಸುಮಾರು 102 ಕೋಟಿ ರೂ. ಹಣ ಅಕ್ರಮವಾಗಿದೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರಿನಲ್ಲಿ ಅಕ್ರಮವಾಗಿ ಹಣ ಕೊಳ್ಳೆ ಹೊಡೆಯಲಾಗಿದೆ ಎನ್ನಲಾಗಿದೆ.
Poll (Public Option)

Post a comment
Log in to write reviews