ರೇಣುಕಾಸ್ವಾಮಿ ಕೇಸ್ನಲ್ಲಿ ಹಣದ ವ್ಯವಹಾರ: ದರ್ಶನ್ಗೆ ಸಂಕಷ್ಟ ತಪ್ಪಿಲ್ವಾ?
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನಿಗೆ ಪ್ರಯತ್ನಿಸುತ್ತಿದ್ದಾರೆ. ಕುಟುಂಬದವರ ಜೊತೆ ಅವರು ವಕೀಲರ ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಈ ಮಧ್ಯೆ ದರ್ಶನ್ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದು, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಹಣದ ವಹಿವಾಟು ಕೂಡ ನಡೆದಿದೆ. ಈ ಪ್ರಕರಣದ ವಿಚಾರಣೆಯನ್ನು ಐಟಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ. ಈ ಕೇಸಲ್ಲಿ ದರ್ಶನ್ರ ವಿಚಾರಣೆ ನಡೆಯಲಿದೆ. ಇದರಿಂದ ಅವರಿಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸೆಪ್ಟೆಂಬರ್ 26 ಅಥವಾ 27ರಂದು ಬಳ್ಳಾರಿ ಜೈಲಿಗೆ ಬಂದು ದರ್ಶನ್ರ ವಿಚಾರಣೆ ಮಾಡಲಿದ್ದಾರೆ. ಐಟಿ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ನ್ಯಾಯಾಲಯದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಇ-ಮೇಲ್ ರವಾನೆ ಮಾಡಲಾಗಿದೆ.
ಕೊಲೆ ಆರೋಪ ಮತ್ತೊಬ್ಬರ ಮೇಲೆ ಹೊರಿಸಲು ದರ್ಶನ್ ಪ್ಲ್ಯಾನ್ ಮಾಡಿದ್ರ ನಟ ದರ್ಶನ್? ಅಷ್ಟು ದೊಡ್ಡ ಮೊತ್ತದ ಕ್ಯಾಶ್ ಎಲ್ಲಿಂದ ಬಂತು? ಹೇಗೆಲ್ಲ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಸದ್ಯ ಐಟಿ ಅಧಿಕಾರಿಗಳು ಬರುವುದನ್ನು ಜೈಲಾಧಿಕಾರಿಗಳು ಖಚಿತಪಡಿಸಿದ್ದಾರೆ.
ಕೋರ್ಟ್ನಲ್ಲಿ ನಟ ದರ್ಶನ್ ವಿಚಾರಣೆ ಸೆಪ್ಟೆಂಬರ್ 27ರಂದು ನಡೆಯಲಿದೆ. ನಟ ದರ್ಶನ್ ಜಾಮೀನು ನಿರೀಕ್ಷೆಯಲ್ಲಿ ಇರುವಾಗಲೇ ಮತ್ತೊಂದು ಶಾಕ್. ಐಟಿ ಅಧಿಕಾರಿಗಳು ಕೇಳುವ ಪ್ರಶ್ನೆಗೆ ಅವರು ಉತ್ತರ ನೀಡಬೇಕಿದೆ.
Post a comment
Log in to write reviews