
ನಿರೀಕ್ಷೆಯಂತೆ ಜೂನ್ ತಿಂಗಳ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದ್ದು, ಕಳೆಡೆರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಭಾನುವಾರ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಮರಗಳು ಬಿದ್ದು ಅನಾಹುತಗಳು ಸೃಷ್ಟಿಯಾಗಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮಳೆ ಅಬ್ಬರಿಸುವ ಸಾಧ್ಯತೆಯಿದ್ದು, ಗಂಟೆಗೆ 40-52 ಕಿಮೀ ವೇಗದಲ್ಲಿ ಗಾಳಿ ಬೀಸುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮಳೆಗೆ ನಗರದ ಅನೇಕ ಕಡೆ ಭಾರೀ ಅವಾಂತರಗಳು ಸಂಭವಿಸಿವೆ. ಅದೇ ರೀತಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮರದ ಕೆಳಗೆ ಬೈಕ್, ಕಾರು ನಿಲ್ಲಿಸುವ ಮುನ್ನ ಎಚ್ಚರವಹಿಸಿ ಹಾಗೂ ಮಳೆ ಬಂದಾಗ ಅಂಡರ್ ಪಾಸ್ ರಸ್ತೆಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಲು ಸೂಚಿಸಲಾಗಿದೆ.
ಬೆಂಗಳೂರು ಅಲ್ಲದೆ ಉಡುಪಿ, ದಕ್ಷಿಣಕನ್ನಡ, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಬಳ್ಳಾರಿ, ಗದಗ, ಧಾರವಾಡದಲ್ಲೂ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
Poll (Public Option)

Post a comment
Log in to write reviews