ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಸಮಾರು 53,342 ಅನರ್ಹ ಕಾರ್ಡ್‌ದಾರರನ್ನು ಪತ್ತೆ ಮಾಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಇನ್ನಷ್ಟು ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವ ಕಾರ್ಯವನ್ನು ಇಲಾಖೆ ಮುಂದುವರೆಸಿದೆ.
ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಪಡಿತರ ಚೀಟಿ ಪಡೆದು ಸರ್ಕಾರಿ ಸೌಲಭ್ಯ ಪಡೆಯುತ್ತಿರುವವರನ್ನು ಗುರುತಿಸಿ ಅವರ ಕಾರ್ಡ್ಗಳನ್ನು ರದ್ದು ಮಾಡುವ ಅಥವಾ ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸುವ ಕೆಲಸ ಮಾಡಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್ ಪತ್ತೆ ಹಚ್ಚಲಾಗುತ್ತಿದೆ. ಹಾಲಿ ಬಿಪಿಎಲ್ ಕಾರ್ಡ್ನಲ್ಲಿ ರಾಜ್ಯ ಸರ್ಕಾರ ಪಡಿತರ ಚೀಟಿಯಲ್ಲಿರುವ ಎಲ್ಲರಿಗೂ ತಲಾ 5 ಕೆ.ಜಿಯಂತೆ ಅಕ್ಕಿ ಹಾಗೂ ಅಕ್ಕಿ ಹಣವನ್ನು ಖಾತೆಗೆ ಜಮೆ ಮಾಡುತ್ತಿದೆ. ಬಿಪಿಎಲ್ ಕಾರ್ಡ್ ಅನ್ನು ಸರ್ಕಾರಿ ಆಸ್ಪತ್ರೆ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯ ಪಡೆಯುವಲ್ಲಿ ಬಳಸಿಕೊಳ್ಳಲಾಗುತ್ತಿದೆ.
ಬಿಪಿಎಲ್ ಕಾರ್ಡ್ ಪಡೆಯಲು ಇರುವ ಮಾನದಂಡ:
1) ಒಂದು ಕುಟುಂಬ ಬಿಪಿಎಲ್ ಕಾರ್ಡ್ ಪಡೆಯಬೇಕಾದರೆ ಅವರ ವಾರ್ಷಿಕ ಆದಾಯ ಮಿತಿ 1.20 ಲಕ್ಷ ರೂ.ಗಿಂತ ಕಡಿಮೆ ಇರಬೇಕು.
2) ಮನೆಯಲ್ಲಿ ಯಾರೂ ಸರ್ಕಾರಿ ಉದ್ಯೋಗಿ ಇರಬಾರದು.
3) ಆದಾಯ ತೆರಿಗೆ ಪಾವತಿ ಮಾಡುವಂತಿರಬಾರದು.
ಪಡಿತರ ಚೀಟಿ ಅನರ್ಹ ಹಾಗೂ ದಂಡ ವಿಧಿಸುವ ಕುರಿತು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಉಪ ನಿರ್ದೇಶಕರಾದ ಅವಿನ್ ಅವರು ಮಾಹಿತಿ ನೀಡಿದ್ದು, "ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4 ಲಕ್ಷದ 73 ಸಾವಿರದ 32 ಪಡಿತರ ಚೀಟಿಗಳಿವೆ. ಇದರಲ್ಲಿ ಎಪಿಎಲ್ 1.3 ಲಕ್ಷ ಕಾರ್ಡ್ ಇದೆ. 3 ಲಕ್ಷದ 70 ಸಾವಿರ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ಗಳಿವೆ. ಈಗ ಅನರ್ಹ ಪಡಿತರ ಚೀಟಿಯನ್ನು ಪತ್ತೆ ಮಾಡಿ ಅವರನ್ನು ವಜಾ ಮಾಡುವ ಕೆಲಸ ಮಾಡಲಾಗುತ್ತಿದೆ. ಇದರಲ್ಲಿ 6 ತಿಂಗಳಿಗೂ ಹೆಚ್ಚು ಕಾಲ ರೇಷನ್ ಪಡೆಯದೆ ಇರುವ 8 ಸಾವಿರ ರೇಷನ್ ಕಾರ್ಡ್ ಅನ್ನು ಸಸ್ಪೆಂಡ್ ಮಾಡಲಾಗಿದೆ.
Post a comment
Log in to write reviews