
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಮಳೆಯಾಗಲಿದೆ. ಭಾಲ್ಕಿ, ಕಮ್ಮರಡಿ, ಗೇರುಸೊಪ್ಪ, ಬಾಳೆಹೊನ್ನೂರು, ಗೌರಿಬಿದನೂರು, ಬೀದರ್, ಶೃಂಗೇರಿ, ಹೊನ್ನಾಳಿ, ಧರ್ಮಸ್ಥಳ, ಹುಮನಾಬಾದ್, ಹೊಸಕೋಟೆ, ಜಯಪುರ, ಎನ್ಆರ್ಪುರ, ಸಅಥಣಿ, ನರಗುಂದ, ಕಮಲಾಪುರ, ಖಜೂರಿ, ಕೊಪ್ಪ, ಕಳಸ, ಮೂಡಿಗೆರೆ, ಭದ್ರಾವತಿ, ಕುಶಾಲನಗರ, ತರೀಕೆರೆಯಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬುಧವಾರ ಸಂಜೆ ಮಳೆಯಾಗಿದೆ, ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Poll (Public Option)

Post a comment
Log in to write reviews