
ನವದೆಹಲಿ: ದೆಹಲಿಯಲ್ಲಿರುವ ತಮ್ಮ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಹಚ್ಚಿದ್ದಾರೆ ಆಗಾಗ ನನ್ನ ಮನೆಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಲೋಕಸಭೆ ಸಂಸದ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ನಿನ್ನೆ ಕೆಲವು ಕೆಲ ದುಷ್ಕರ್ಮಿಗಳು ನನ್ನ ಮನೆ ಮೇಲೆ ಮಸಿ ಎರಚಿದ್ದಾರೆ. ದೆಹಲಿಯಲ್ಲಿರುವ ನನ್ನ ಮನೆಯನ್ನು ಆಗಾಗ ಟಾರ್ಗೆಟ್ ಮಾಡಲಾಗುತ್ತಿದೆ. ಈ ಬಗ್ಗೆ ದೆಹಲಿ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರೆ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ನನ್ನ ಮನೆಯನ್ನು ಗುರಿಯಾಗಿಸುವ ಸಣ್ಣ-ಪುಟ್ಟ ಗೂಂಡಾಗಳಿಗೆ ನಾನು ಹೆದರುವುದಿಲ್ಲ. ಸಾವರ್ಕರ್ ಮಾದರಿಯ ಈ ಹೇಡಿತನದ ಕೃತ್ಯವನ್ನು ನಿಲ್ಲಿಸಿ, ಮಸಿ ಎರಚಿದ ನಂತರ ಅಥವಾ ಕಲ್ಲು ತೂರಾಟ ಮಾಡಿದ ನಂತರ ಓಡಿಹೋಗಬೇಡಿ. ನನ್ನನ್ನು ಎದುರಿಸಲು ಧೈರ್ಯ ಮಾಡಿ ಎಂದು ಸವಾಲು ಹಾಕಿದ್ದಾರೆ.
Poll (Public Option)

Post a comment
Log in to write reviews