ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ರಾಜ್ಯ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿದ್ದು, ಮಹತ್ವದ ಆದೇಶ ನೀಡಿದೆ.
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.
Post a comment
Log in to write reviews