
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ ವಾದ ಮಂಡಿಸಿದ್ದಾರೆ
ಇನ್ನು ರಾಜ್ಯಪಾಲರ ಪರ ವಕೀಲ ತುಷಾರ್ ಮೆಹ್ತಾ ಅವರು ಶನಿವಾರ ವಾದ ಮಂಡಿಸುವುದಾಗಿ ಕೋರ್ಟ್ಗೆ ತಿಳಿಸಿದರು. ಇದಕ್ಕೆ ಕೋರ್ಟ್ ಸಹ ಒಪ್ಪಿಗೆ ನೀಡಿದೆ. ಇದರೊಂದಿಗೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೋರ್ಟ್, ಆಗಸ್ಟ್ 31 ಬೆಳಗ್ಗೆ 10:30ಕ್ಕೆ ಮುಂದುಡಿದೆ ಅಲ್ಲದೇ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ಇನ್ನು ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೂ ಸಹ ಸೂಚನೆ ನೀಡಲಾಗಿದೆ
Poll (Public Option)

Post a comment
Log in to write reviews