2024-12-24 07:47:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

MUDA ನನಗೆ 62 ಕೋಟಿ ಕೊಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಮ್ಮ 3 ಎಕರೆ 16 ಗುಂಟೆ ಜಮೀನನ್ನು ಅಕ್ರಮವಾಗಿ ಒತ್ತುವರಿ  ಮಾಡಿದ್ದರಿಂದ ನನಗೆ 62 ಕೋಟಿ ರೂ. ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟ್‌ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ 3 ಎಕ್ರೆ 16 ಗುಂಟೆ ಜಮೀನು ಒತ್ತುವರಿ ಮಾಡಿದ್ದಾರೆ. ಕಾನೂನುಬಾಹಿರವಾಗಿ ಈ ಒತ್ತುವರಿ ನಡೆದಿದೆ. ನಾವು ಒತ್ತುವರಿ ಮಾಡಿದ್ದು ತಪ್ಪು ಎಂದು ಮುಡಾದವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಮುಡಾದವರು ತಪ್ಪು ಮಾಡಿದ್ದಕ್ಕೆ ನಾನು ಯಾಕೆ ಹೊಣೆಗಾರನಾಗಬೇಕು. ನಮಗೆ ಇಲ್ಲೇ ಜಾಗ ನೀಡಬೇಕು ಎಂದು ಕೇಳಿಲ್ಲ. ನಾವೇನೂ ವಿಜಯನಗರದ 3-4 ಹಂತದಲ್ಲಿ ಕೊಡಿ ಎಂದು ಕೇಳಿದ್ದೀವಾ? ನಮಗೆ ಜಾಗ ಹಂಚಿಕೆಯಾಗಿದ್ದು 2021ರಲ್ಲಿ.  2021ರಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿತ್ತು. ಅವರ ಸರ್ಕಾರ ಇರುವಾಗ ಹಂಚಿಕೆಯಾಗಿ ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

Post a comment

No Reviews