ಟಾಪ್ 10 ನ್ಯೂಸ್
ಬಹುಕೋಟಿ ವಂಚನೆ ಪ್ರಕರಣ: ದರ್ವೇಶ್ ಕಂಪನಿ ಮೇಲೆ ಸಿಐಡಿ ಅಧಿಕಾರಿಗಳಿಂದ ದಾಳಿ

ಹುಬ್ಬಳ್ಳಿ: ದರ್ವೇಶ್ ಕಂಪನಿಯಿಂದ ಬಹುಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ವಿಶಾಲನಗರದ ನಿವಾಸವೊಂದರ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದರ್ವೇಶ್ ಎಂಬ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚುವರಿ ಬಡ್ಡಿ ನೀಡುವ ಆಮಿಷವೊಡ್ಡಿ ವಂಚನೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ರಾಯಚೂರು ನಗರದ ಹಲವರಿಗೆ ಬಹುಕೋಟಿ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ವಂಚನೆಗೊಳಗಾದವರು ಈಗಾಗಲೇ ದೂರು ನೀಡಿದ್ದಾರೆ.
ವಂಚನೆ ಸಂಬಂಧ ಅಧಿಕಾರಿಗಳು ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಮುಖ ಆರೋಪಿ ಪತ್ತೆಗಾಗಿ ಇಂದು ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Poll (Public Option)

Post a comment
Log in to write reviews