
ಮಂಗಳೂರು: ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಝ್ ಅಲಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ.
ಅವರ ಕುಟುಂಬದ ಮೂಲ ಮನೆ ಚೊಕ್ಕಬೆಟ್ಟು ಎಂಬಲ್ಲಿ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಉದ್ದನೆಯ ಸಾಲುಗಳಲ್ಲಿ ಜನ ನಿಂತಿದ್ದಾರೆ.
ಬಳಿಕ ಕೃಷ್ಣಾಪುರ ಈದ್ಗಾದಲ್ಲೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆ ಬಳಿಕ ಅಲ್ಲಿನ ಖಬರ್ ಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಂಜೆ 6 ಗಂಟೆಗೆ ಮೊದಲು ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.
Poll (Public Option)

Post a comment
Log in to write reviews