
ಬೆಂಗಳೂರು: ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಶಾಸಕರ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಪ್ರಕರಣದ ಸಾಕ್ಷಿಗಳಿಗೆ ಮುನಿರತ್ನ ಅವರ ಬೆಂಬಲಿಗರು ಬೆದರಿಕೆ ಹಾಕಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಕುರಿತ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್ ಆಗಿದೆ.ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆ ಎಂದು ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಎಂಬುವರಿಂದ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಆರೋಪಿ ಸುನಂದಮ್ಮ ಹಾಗೂ ಬೆಂಬಲಿಗರು, ಸಾಕ್ಷಿಯ ಮನೆಗೆ ಏಕಾಏಕಿ ನುಗ್ಗಿ ಸಂತ್ರಸ್ಥೆಯ ಮಗನಿಗೆ ಬೆದರಿಕೆ ಹಾಕಿದ್ದಾರೆ ಎಂದು ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ಥೆಯ ಮಗ ದೂರು ನೀಡಿದ್ದಾರೆ. ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಸಕ ಮುನಿರತ್ನ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನುವ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅತ್ಯಾಚಾರದ ಬಳಿಕ ಈ ರೂಂನಲ್ಲಿ ಸೀಕ್ರೆಟ್ ವೀಡಿಯೊ ರೆಕಾರ್ಡರ್ ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿದೆ. ನಿನ್ನ ವಿಡಿಯೊ ಎಡಿಟ್ ಮಾಡಿ ಹಂಚುತ್ತೇನೆ. ಹೇಳಿದಂತೆ ಕೇಳಬೇಕು ಎಂದು ಹನಿಟ್ರ್ಯಾಪ್ ಮಾಡುವಂತೆ ಹೇಳಿ ನನ್ನನ್ನು ಬಳಸಿಕೊಂಡರು ಎಂದು ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
Poll (Public Option)

Post a comment
Log in to write reviews