
ಚಿಕ್ಕಮಗಳೂರು: ವಿದ್ಯುತ್ ಶಾಕ್ ತಗುಲಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿ ಸಾವನ್ನಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. 13 ವರ್ಷದ ಆಕಾಶ್ ಸಾವನ್ನಪ್ಪಿರುವ ದುರ್ದೈವಿ.
ಈ ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿ ಸೇರಿ 8 ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ನಿನ್ನೆ ಶಾಲಾ ಆವರಣದಲ್ಲಿ ಇದ್ದ ನೇರಳೆ ಮರದಿಂದ ನೇರಳೆಹಣ್ಣು ಕೀಳಲು ಆಕಾಶ್ ಮತ್ತು ಆವರ ಸ್ನೇಹಿತರು ಹೋಗಿದ್ದರು. ಈವೇಳೆ ಸಮೀಪದಲ್ಲಿದ್ದ ವಿದ್ಯುತ್ ತಂತಿ ಆಕಾಶ್ ಗೆ ಸ್ಪರ್ಶಿಸಿ ಶಾಕ್ ಹೊಡೆದು ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಶಾಲಾ ಸಿಬ್ಬಂದಿಗಳ ಬೇಜವಾಬ್ದಾರಿಯೇ ಕಾರಣ ಎಂದು ಅಮಾನತು ಮಾಡಲಾಗಿದೆ.
ಘಟನೆ ನಡೆದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಆಕಾಶ್ ಸಾವನ್ನಪ್ಪಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Poll (Public Option)

Post a comment
Log in to write reviews