
ಮೈಸೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ರನ್ನ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಆರೋಪಿಗಳು ನಟ ದರ್ಶನ್ ಹೆಸರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಟ ದರ್ಶನ್‌ರನ್ನು ಬಂಧಿಸಿದ್ದಾರೆ. ಆರೋಪಿಗಳು ನೀಡಿದ ಮಾಹಿತಿಯ ಪ್ರಕಾರ ಕೊಲೆಯಾದ ರೇಣುಕಾ ಸ್ವಾಮಿ, ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ರವಾನೆ ಮಾಡಿದ್ದರು ಎನ್ನಲಾಗಿತ್ತು. ಹೀಗಾಗಿ ದರ್ಶನ್ ತನ್ನ ಆಪ್ತರ ಮೂಲಕ ರೇಣುಕಾ ಸ್ವಾಮಿ ಅವರ ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕಳೆದ ಎರಡು ದಿನಗಳ ಹಿಂದೆ ಸುಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ನಟ ದರ್ಶನ್ ಅರೆಸ್ಟ್ ಆಗುತ್ತಿದ್ದಂತೆ ದರ್ಶನ್ ಮನೆಗೆ ಬಿಗಿ ಭದ್ರತೆ ಮಾಡಲಾಗಿದೆ. ಫ್ಯಾನ್ಸ್‌ಗಳಿಂದ ಏನಾದ್ರೂ ತೊಂದರೆ ಆಗಬಹುದು ಅನ್ನೋ ಕಾರಣಕ್ಕಾಗಿ ಪೊಲೀಸರು ಈ ಮುನ್ನೆಚ್ಚರಿಕೆ ವಹಿಸಿದ್ದಾರೆ. 20ಕ್ಕೂ ಹೆಚ್ಚು ಪೊಲೀಸರನ್ನು ದರ್ಶನ್ ಮನೆ ಮುಂದೆ ನಿಯೋಜನೆ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪವಿತ್ರಾ ಗೌಡರನ್ನೂ ಅರೆಸ್ಟ್ ಮಾಡಲಾಗಿದೆ. ಆರ್.ಆರ್.ನಗರ ಪೊಲೀಸರು ಪವಿತ್ರಾ ಗೌಡರನ್ನ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews