
ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಪ್ರಭು ಮುಂಡ್ಕೂರ್ ನಟನೆಯ ಮರ್ಫಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟಂಬರ್ 27ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯಗಳಿಗೆ ಚಾಲನೆ ಕೊಡಲಾಗಿದೆ. ಮರ್ಫಿ ಅಂಗಳದಿಂದ ಸಮಯ ಎಂಬ ಮನಮೋಹಕ ಹಾಡು ಬಿಡುಗಡೆ ಮಾಡಲಾಗಿದೆ.
ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಗೀತೆಗೆ ಧನಂಜಯ್ ರಂಜನ್ ಪದ ಗೀಚಿದ್ದು, ರಜತ್ ಹೆಗ್ಡೆ ಧ್ವನಿಯಾಗಿದ್ದಾರೆ. ನಾಯಕ ಪ್ರಭು ಮುಂಡ್ಕೂರ್, ನಾಯಕಿಯರಾದ ರೋಶಿನಿ ಪ್ರಕಾಶ್ ಹಾಗೂ ಇಳಾ ವೀರಮಲ್ಲ ಹಾಡಿನಲ್ಲಿ ಮಿಂಚಿದ್ದಾರೆ.
BSP ವರ್ಮಾ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭು ಮುಂಡ್ಕೂರ್, ರೋಶಿನಿ ಪ್ರಕಾಶ್ , ಇಳಾ ವೀರಮಲ್ಲ ಜೊತೆಯಲ್ಲಿ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ. ನವೀನ್ ರೆಡ್ಡಿ, ಪ್ರಭು, ವರ್ಮಾ ಸಂಭಾಷಣೆ ಬರೆದಿದ್ದು, ಮಹೇಶ ತೊಗಟ ಸಂಕಲನ, ಆದರ್ಶ ಆರ್ ಕ್ಯಾಮೆರಾ ಹಿಡಿದ್ದಾರೆ.
ಸೋಮಣ್ಣ ಟಾಕೀಸ್ ಮತ್ತು ವರ್ಣಸಿಂಧು ಸ್ಟುಡಿಯೋಸ್ ಬ್ಯಾನರ್ ನಡಿ ರಾಮ್ ಕೋ ಸೋಮಣ್ಣ ಹಾಗೂ ಬಿಎಸ್ ಪಿ ವರ್ಮಾ ಮರ್ಫಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಯು ಸರ್ಟಿಫಿಕೇಟ್ ಪಡೆದು ಸೆನ್ಸಾರ್ ಪಾಸಾಗಿರುವ ಈ ಚಿತ್ರದಲ್ಲಿ ಮನರಂಜನೆ ಜೊತೆಗೆ ಎಮೋಷನಲ್ ಅಂಶಗಳನ್ನು ಅಚ್ಚುಕಟ್ಟಾಗಿ ಕಟ್ಟಿ ಕೊಡಲಾಗಿದೆ. ಇನ್ನು ಮರ್ಫಿಯಲ್ಲಿ ಏಳು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಪಕ್ಕ ಸೆಪ್ಟಂಬರ್ 27ರಂದು ರಾಜ್ಯಾದ್ಯಂತ ಮರ್ಫಿ ಸಿನಿಮಾ ಬೆಳ್ಳಿಪರದೆಗೆ ಎಂಟ್ರಿ ಕೊಡಲಿದೆ.
Poll (Public Option)

Post a comment
Log in to write reviews