
ಮೈಸೂರು-ದರ್ಬಾಂಗ್ ಎಕ್ಸ್‌ಪ್ರೆಸ್ ರೈಲು ಚೆನ್ನೈ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ಅನಾಹುತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಮೈಸೂರು-ದರ್ಭಾಂಗ್ ಎಕ್ಸ್‌ಪ್ರೆಸ್ 2 ಬೋಗಿಗಳಿಗೆ ಬೆಂಕಿ ತಗುಲಿದ್ದು, ಸುಟ್ಟು ಭಸ್ಮವಾಗಿದೆ.
ಕರ್ನಾಟಕದಿಂದ 1 ಸಾವಿರಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಬೆಂಗಳೂರಿನಿಂದ ನಾಗಪುರಕ್ಕೆ ಹೊರಟ್ಟಿದ್ದ 45 ಮಂದಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ 3 ಬೋಗಿಗಳು ಹೊತ್ತಿ ಉರಿದು, 50ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 6 ಬೋಗಿಗಳು ಹಳಿ ತಪ್ಪಿರುವ ಮಾಹಿತಿ ಸಿಕ್ಕಿದೆ. ಅವಘಡದಿಂದ ಪಾರಾಗಲು ಜನರು ರೈಲಿನ ಕಿಟಕಿಯಿಂದ ಹೊರ ಬಂದಿದ್ದಾರೆ. ಅಪಘಾತ ಸ್ಥಳಕ್ಕೆ ವೈದ್ಯಕೀಯ ಸಿಬ್ಬಂದಿ, ರೈಲ್ವೇ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯ ರಾತ್ರಿಯಿಡಿ ನಡೆದಿದೆ.
Poll (Public Option)

Post a comment
Log in to write reviews