ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆನ್ನಲ್ಲೆ ಮತ್ತೊಂದು ಮಹತ್ವದ ಬೆಳವಣಿಗೆಗೆ ಮೈಸೂರು ಸಾಕ್ಷಿಯಾಗಿದೆ. ಇಂದು ಮುಡಾ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಧಿಡೀರನೆ ದಾಳಿ ನಡೆಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಮುಡಾ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಮುಡಾ ಕಚೇರಿಯಲ್ಲಿ ಅಕ್ರಮಗಳ ನಡೆದಿದೆ ಎಂದು ಆರೋಪಿಸಿ ಸಿಬಿಐ ತನಿಖೆಗೆ ಆಗ್ರಹಿಸಿದ್ದರು. ಈ ಬೆನ್ನಲ್ಲೇ ಮುಡಾ ಕಚೇರಿಯ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಲೆಕ್ಕಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಳೆದ 1 ಗಂಟೆಯಿಂದ ಮಹತ್ವದ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದದ ಕೇಸ್ ನಲ್ಲಿ ಇದೊಂದು ದೊಡ್ಡ ಬೆಳವಣಿಗೆ ಆಗಿದೆ. ಮೈಸೂರು ಮುಡಾ ಕಚೇರಿಯ ವಿವಿಧ ಕೊಠಡಿಯಲ್ಲಿ 5 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಹಳೆಯ ದಾಖಲೆಗಳನ್ನ ಇಂಚಿಂಚೂ ಪರಿಶೀಲಿಸಿದ್ದಾರೆ. ಮತ್ತೊಂದೆಡೆ ದೇವರಾಜು ನಿವಾಸದ ಮೇಲೂ ಇ.ಡಿ ರೇಡ್ ಆಗಿದ್ದು ಭೂ ಮಾಲೀಕ ದೇವರಾಜು ನಿವಾಸದಲ್ಲಿ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸ ಮಹತ್ವದ ಪರಿಶೀಲನೆ ನಡೆಯುತ್ತಿದೆ .
Post a comment
Log in to write reviews