ವಿಶ್ವಕಪ್ ನಲ್ಲಿ 2 ತಂಡಗಳ ಪ್ರಾಯೋಜಕತ್ವ ಪಡೆದ ನಂದಿನಿ: ಸಂಭ್ರಮ ವ್ಯಕ್ತಪಡಿಸಿದ ಸಿ ಎಂ

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಜನಪ್ರಿಯ ಸಂಸ್ಥೆ ಕೆ ಎಂ ಎಫ್ ಸ್ಕಾಟ್ ಲ್ಯಾಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಯೋಜಕತ್ವವನ್ನು ಪಡೆದುಕೊಂಡಿದೆ. ಈ ಎರಡು ತಂಡಗಳ ಆಟಗಾರರು ನಂದಿನಿ ಲೋಗೋ ಹೊಂದಿರುವ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ಈ ಕುರಿತು ಸಿ ಎಂ ಸಿದ್ದರಾಮಯ್ಯ “ಈ ಬಾರಿ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ನಂದಿನಿ ಕಂಗೊಳಿಸಲಿದೆ ಕನ್ನಡ” ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಸಂಬ್ರಮ ವ್ಯಕ್ತಪಡಿಸಿದ್ದಾರೆ.
ಇದರ ಸಂಪೂರ್ಣ ಟ್ವೇಟ್ ಇಲ್ಲಿದೆ ನೋಡಿ
ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ.
Tags:
Poll (Public Option)

Post a comment
Log in to write reviews