
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿರುವ ಅವರು, ಲೋಕ್ಷಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 240 ಸ್ಥಾನಗಳನ್ನು ಗಳಿಸಿತ್ತು. ಆದರೆ ಬಹುಮತದ 272ಕ್ಕಿಂತ ಕಡಿಮೆಯಾಗಿದೆ. ಹೀಗಾಗಿ ಸರ್ಕಾರ ರಚಿಸಲು ಪಕ್ಷವು ತನ್ನ ಮಿತ್ರಪಕ್ಷಗಳ ಮೇಲೆ ಅವಲಂಬಿತವಾಗಿ ಸರ್ಕಾರ ರಚನೆಯಾಗಿದೆ. ಹಾಗಾಗಿ ಇದು ಐದು ವರ್ಷಗಳ ಕಾಲ ದೃಢವಾಗಿ ನಿಲ್ಲುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಇದು ಅಲ್ಪ ಸಂಖ್ಯೆಯ ಸರ್ಕಾರವಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು. ಆದರೆ ಎನ್‌ಡಿಎ ಸರ್ಕಾರ ಚೆನ್ನಾಗಿ ನಡೆಯಲಿ ಎಂದು ನಾವು ಆಶಿಸುತ್ತೇವೆ. ಆದರೆ ಪ್ರಧಾನಿ ಮೋದಿಯವರು ಸರ್ಕಾರ ಸುಗಮವಾಗಿ ನಡೆಯಲು ಬಿಡುವುದಿಲ್ಲ, ದೇಶವನ್ನು ನಾವು ನಮ್ಮ ಕಡೆಯಿಂದ ಸಹಕರಿಸುತ್ತವೆ ಎಂದು ಹೇಳಿದ್ದಾರೆ.
Poll (Public Option)

Post a comment
Log in to write reviews