
ದೆಹಲಿ: ಮೂರನೇ ಬಾರಿಗೆ ಅಧಿಕಾರವಹಿಸಿಕೊಂಡಿರುವ ನರೇಂದ್ರ ಮೋದಿ ಸರ್ಕಾರ ತನ್ನ ಪೂರ್ಣಪ್ರಮಾಣದ ಬಜೆಟ್ ಮಂಡನೆ ಮಾಡಲಿದೆ. ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವರಾಗಿ ಮುಂದುವರಿದಿದ್ದು, ಜುಲೈನಲ್ಲಿ ಬಜೆಟ್ ಮಂಡಿಸುವುದು ಖಚಿತವಾಗಿದೆ.
ಜುಲೈ ಮೂರನೇ ವಾರದಲ್ಲಿ ಸಂಸತ್‌ನಲ್ಲಿ ಬಜೆಟ್ ಮಂಡನೆ ಮಾಡುವ ನಿರೀಕ್ಷೆ ಇದೆ. ಜೂನ್ 24ರಿಂದ ಮೋದಿ ಹೊಸ ಸರ್ಕಾರದ ಮೊದಲ ಅಧಿವೇಶನ ನಡೆಯಲಿದೆ. ಆರಂಭದ ಮೂರು ದಿನದಲ್ಲಿ ನೂತನ ಸಂಸದರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಜೂನ್ 27ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಸಭೆ ಮತ್ತು ಲೋಕಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜುಲೈ 3ರವರೆಗೂ ಈ ಅಧಿವೇಶನ ಮುಂದುವರಿಯಲಿದೆ
Poll (Public Option)

Post a comment
Log in to write reviews