ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಪಕ್ಕಾ: ಮಿತ್ರ ಪಕ್ಷದೊಂದಿಗೆ ಮೈತ್ರಿ ಮುಂದುವರಿಕೆ

ಬಿಜೆಪಿ ನೇತೃತ್ವದ ಎನ್‌ಡಿಎ ಮಿತ್ರ ಪಕ್ಷಗಳು ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಈ ಹಿನ್ನಲೆಯಲ್ಲಿ ಮಿತ್ರ ಪಕ್ಷಗಳಾದ ಟಿಡಿಪಿಯ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಲು ನಿರ್ಧರಿಸಿ, ಬೆಂಬಲ ಘೋಷಿಸಿದೆ.
ಇದೇ ವೇಳೆ 234 ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ನೇತೃತ್ವದ ಇಂಡಿಯ ಒಕ್ಕೂಟ ಕೂಡ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ತೆರೆಮರೆಯ ಕಸರತ್ತು ನಡೆಸುತ್ತಿದೆ. ಇದಕ್ಕಾಗಿ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ದಿ ಹಾಗೂ ಆರೋಗ್ಯದಂಥಹ ಪ್ರಬಲ ಖಾತೆ ನೀಡುವುದಾಗಿ ಚಂದ್ರಬಾಬು ನಾಯ್ಡುಇಂಡಿಯ ಒಕ್ಕೂಟ ಭರವಸೆ ನೀಡಿದೆ ಎನ್ನಲಾಗಿದೆ.
ಇದೇ ವೇಳೆ ನಿತೀಶ್ ಕುಮಾರ್ ಕೂಡಾ ಬಿಜೆಪಿ ಯೊಂದಿಗೆ ಚೌಕಾಶಿಯಲ್ಲಿ ತೊಡಗಿದ್ದರೂ, ಮಿತ್ರಪಕ್ಷಗಳೊಂದಿಗೆ ಸಭೆ ನಡೆಸಲಿರುವ ಬಿಜೆಪಿ ಸಮನ್ವಯ ಸಾಧಿಸುವ ಪ್ರಯತ್ನದಲ್ಲಿ ತೊಡಗಿದೆ. ನಿತೀಶ್ ಕುಮಾರ್ ಕೂಡಾ ನಾಲ್ಕು ಪ್ರಬಲ ಖಾತೆಯೊಂದಿಗೆ ಸ್ಪೀಕರ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಂದು ಸಂಜೆ ಮಿತ್ರಪಕ್ಷಗಳೊಂದಿಗೆ ಸಭೆಯ ಬಳಿಕ ಸರ್ಕಾರದ ರಚನೆಯ ಕುರಿತು ಅಂತಿಮ ನಿರ್ಧಾರ ಪ್ರಕಟವಾಗಲಿದೆ.
Poll (Public Option)

Post a comment
Log in to write reviews