
ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಎನ್‌ಡಿಎ ಇದರ ಸಂಸದೀಯ ಪಕ್ಷದ ಸಭೆ ಇಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಮೂರನೇ ಅವಧಿಗೆ ಅಧಿಕಾರ ಬಳಿಕ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಆಡಳಿತ ಪಕ್ಷಗಳ ಸಂಸದರನ್ನು ಉದ್ದೇಶಿಸಿ ಪ್ರಧಾನಿ ಮೋದಿಯ ಮೊದಲ ಭಾಷಣ ಇದಾಗಿದೆ. ಇಂದು ನಡೆಯಲಿರುವ ಸಭೆಯ ಬಗ್ಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಎಲ್ಲಾ ಸಂಸತ್ ಸದಸ್ಯರಿಗೆ ಸೂಚನೆ ನೀಡಲಾಗಿದೆ ಮತ್ತು ಹಾಜರಾಗುವಂತೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Poll (Public Option)

Post a comment
Log in to write reviews