
ನವದೆಹಲಿ: ವೈದ್ಯಕೀಯ ಕ್ಷೇತ್ರದ ಸ್ನಾತಕೋತ್ತರ ಕೋರ್ಸ್ ಪ್ರವೇಶಕ್ಕೆ ಇರುವ ನೀಟ್–ಪಿಜಿ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ ತಿಳಿಸಿದೆ.
ಮೇ 5ರಂದು ನಡೆದಿದ್ದ ನೀಟ್–ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂಬ ಕೂಗು ಕೇಳಿಬಂದಿತ್ತು. ಈ ವಿವಾದದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ನಡೆಯಬೇಕಿದ್ದ, ನೀಟ್–ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿತ್ತು, ಈಗ ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಿದೆ.
Poll (Public Option)

Post a comment
Log in to write reviews