
ದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಇಂದು ಜಾರ್ಖಂಡ್ ನ ಹಜಾರಿಬಾಗ್ ನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿದೆ.
ಬಂಧಿತರನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದ್ದು, ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಜೂನ್.28ರಂದು ಬಂಧಿಸಲಾದ ಓಯಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರಿಗೆ ಈತ ಸಹಾಯ ಮಾಡಿದ್ದ ಎನ್ನಲಾಗಿದೆ. ಗುಜರಾತ್ ನಲ್ಲಿ ಸಿಬಿಐ ತಂಡಗಳು ಗೋದ್ರಾ, ಖೇಡಾ, ಅಹಮದಾಬಾದ್ ಮತ್ತು ಆನಂದ್‌ನ 7 ಸ್ಥಳಗಳಲ್ಲಿ ಕೆಲವು ಶಂಕಿತರ ಮೇಲೆ ಶೋಧ ನಡೆಸುತ್ತಿವೆ. ಇದು ಗೋಧ್ರಾ ಪೊಲೀಸರು ಈ ಹಿಂದೆ ತನಿಖೆ ನಡೆಸಿದ ಎಫ್ಐಆರ್ ಗೆ ಸಂಬಂಧಿಸಿದೆ.
Poll (Public Option)

Post a comment
Log in to write reviews