
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದ್ದರಿಂದ ಈಗಾಗಲೇ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಡ ಜೋರಾಗಿಯೇ ಇದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ 'ದಸರಾಗೆ ಹೊಸ ಸಿಎಂ..' ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್ ಆಗಿದೆ.
ಸಿಎಂ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲಿಯೇ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಆರಂಭವಾಗಿದೆ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಇನ್ನು ಕಾಂಗ್ರೆಸ್‌ನಲ್ಲಿಯೂ ಸಹ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಕ್ಕೆ ಇಳಿಸಲು ಈಗಾಗಲೇ ಸದ್ದಿಲ್ಲದೇ ಪ್ರಯತ್ನಗಳು ನಡೆದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯ 'ದಸರಾಗೆ ಹೊಸ ಸಿಎಂ..' ಎಂದು ಸೋಶಿಯಲ್ ಮೀಡಿಯಾದಲ್ಲಿ ವೀಮ್ಸ್ಗಳು ವ್ಯಾಪಕವಾಗಿ ಹರಿದಾಡುತ್ತಿವೆ.
Poll (Public Option)

Post a comment
Log in to write reviews