2024-12-24 06:35:30

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಆಂಧ್ರದಲ್ಲಿ ಹೊಸ ಅಬಕಾರಿ ನೀತಿ..! ಮದ್ಯ ಪ್ರಿಯರಿಗೆ ಹಬ್ಬವೋ ಹಬ್ಬ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ನೇತೃತ್ವದ ಎನ್ಡಿಎ ಸರ್ಕಾರ ಹೊಸ ಮದ್ಯ ನೀತಿಯನ್ನು ಪ್ರಕಟಿಸಿದ್ದು, ಹರಿಯಾಣ ಮತ್ತು ಇತರೆ ರಾಜ್ಯಗಳ ಮಾದರಿಯಲ್ಲಿ ಖಾಸಗಿ ಚಿಲ್ಲರೆ ವ್ಯಾಪಾರಿಗಳಿಗೆ ಮದ್ಯ ಮಾರಾಟ ಅವಕಾಶ ಮಾಡಿಕೊಟ್ಟಿದ್ದು, ಇದರಿಂದ ರಾಜ್ಯ ಸರ್ಕಾರವು 5,500 ಕೋಟಿ ಆದಾಯ ಗಳಿಸುವ ನಿರೀಕ್ಷೆ ಹೊಂದಿದೆ. 


ಆಂಧ್ರದಲ್ಲಿ ನಕಲಿ ಹಾಗೂ ಕಳಪೆ ಗುಣಮಟ್ಟದ ಲಿಕ್ಕರ್ ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಎನ್ ಡಿಎ ಸರ್ಕಾರವು ರಾಜ್ಯದಾದ್ಯಂತ 3,736 ಹೊಸ ಮದ್ಯದ ಮಾರಾಟ ಮಳಿಗೆಗಳನ್ನು ತೆರೆಯಲು ನಿರ್ಧರಿಸಿದೆ. ನಾಯ್ಡು ಸರ್ಕಾರ ರಾಜ್ಯದಲ್ಲಿ 99 ರೂ ಗೆ ಬೆಲೆ ನಿಗದಿಪಡಿಸಿದ್ದು, ಇದರ ನೆರವಿನಿಂದ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವುದಲ್ಲದೆ ಸ್ಥಳೀಯ ಕಂಪನಿಗಳಿಗೂ ಅಗ್ಗದ ಬ್ರಾಂಡೆಡ್ ಮದ್ಯ ತಯಾರಿಸುವ ಅವಕಾಶ ಸಿಗಲಿದೆ ಎಂದು ರಾಜ್ಯ ಸರಕಾರ ಹೇಳಿಕೊಂಡಿದೆ. ಇತರ ರಾಜ್ಯಗಳಲ್ಲಿ ಇರುವ ಉತ್ತಮ ಅಬಕಾರಿ ನೀತಿಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ ಬಳಿಕ ಚಂದ್ರಬಾಬು ನಾಯ್ಡು ಸರ್ಕಾರ ಹೊಸ ಮದ್ಯ ನೀತಿಯನ್ನು ಜಾರಿಗೆ ತರಲಾಗಿದೆ.
 

Post a comment

No Reviews