
ಟ್ರಾಫಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಬೆಂಗಳೂರು ಜನರು ಇಂದು ಮೆಟ್ರೋ ಮೊರೆ ಹೋಗಿದ್ದಾರೆ, ದಿನದಿಂದ ದಿನಕ್ಕೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಇದರ ನಡುವೆ ಟೋಕನ್ ಟಿಕೆಟ್ ಕಿರಿಕಿರಿ ತಪ್ಪಿಸಲು ಮೆಟ್ರೋ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಅದೇನೆಂದರೆ ಹೊಸ ಕ್ಯೂಆರ್ ಕೋಡನ್ನು ಪರಿಚಯಿಸಿದೆ. ಇದನ್ನು ತಿಂಗಳಿಗೆ 25 ಲಕ್ಷ ಜನ ಬಳಕೆ ಮಾಡುತ್ತಾರೆ.
ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲು ನಮ್ಮ ಮೆಟ್ರೋ ನಿಲ್ದಾಣದಲ್ಲಿ ಒಂದು ನಿಮಿಷದೊಳಗೆ ಕ್ಯೂಆರ್ ಕೋಡ್ ಖರೀದಿಗೆ ವ್ಯವಸ್ಥೆ ಮಾಡಿದೆ.
ಮೊಬೈಲ್ ನಲ್ಲಿ ನೆಟ್ವರ್ಕ್ ಸರಿ ಇಲ್ಲದಿದ್ದಾಗ ಪ್ರಯಾಣಿಕರು ಕ್ಯೂಆರ್ ಟಿಕೆಟ್ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಇಂತಹ ವೇಳೆ ಈ ಕ್ಯೂಆರ್ ಟಿಕೆಟ್ ಮಿಷನ್ ಸಹಾಯವಾಗಲಿದೆ. ಎಂದು ಬಿ ಎಂ ಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶ್ವಂತ್ ಚವ್ಹಾಣ್ ಹೇಳಿದ್ದಾರೆ.
Poll (Public Option)

Post a comment
Log in to write reviews