
ಸಿಡಿಲು ಬಡಿದ ನವ ವಿವಾಹಿತನೊಬ್ಬ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. 34 ವರ್ಷದ ಸೋಮ ಸುಂದರ್ ಸಾವನ್ನಪ್ಪಿರುವ ದುರ್ದೈವಿ.ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುವ ವೇಳೆ ಸಿಡಿಲು ಬಡಿದ ಪರಿಣಾಮ ಸಾವು ಸಂಭವಿಸಿದೆ.
ಸೋಮಸುಂದರ್ ಅವರನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ಮಾಡಿದ್ದರು.ಆದರೆ ದುರಾದೃಷ್ಟವಶಾತ್ ಮಾರ್ಗ ಮಧ್ಯೆ ಜೀವ ಹೋಗಿದೆ. 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಸೋಮಸುಂದರ್ ಸಾವು ಈಗ ಕುಟುಂಬಕ್ಕೆ ಭರಿಸಲಾಗದ ನಷ್ಟವಾಗಿದೆ.
Poll (Public Option)

Post a comment
Log in to write reviews