
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹೆಸರು ಪ್ರಕಟಿಸಲಾಗಿದ್ದು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಮಣೆಹಾಕಲಾಗಿದೆ. ಈ ಮೂಲಕ ಎನ್ ಡಿಎ ಅಭ್ಯರ್ಥಿ ಗೊಂದಲಕ್ಕೆ ತೆರಬಿದ್ದಿದೆ.
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ. ಬಿಎಸ್ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.
ಇನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರ ಸಮನ್ವಯ ಸಭೆಗೂ ಮೊದಲೇ ಇತ್ತ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿಯೇ ಚನ್ನಪಟ್ಟಣದ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಜೆಡಿಎಸ್ ಸಭೆ ಬಳಿಕ ಮಾತನಾಡಿದ ದೇವೇಗೌಡ, ನಿಖಿಲ್ ಅಭ್ಯರ್ಥಿಯಾಗಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮೊನ್ನೆ ನಡೆದ ಸಭೆಯಲ್ಲೇ ಸರ್ವಾನುಮತ ನಿರ್ಧಾರ ಕೈಗೊಳ್ಳಲಾಗಿತ್ತು. ಚನ್ನಪಟ್ಟಣ ಅಭ್ಯರ್ಥಿಯಾಗಿ ನಾಳೆ ನಿಖಿಲ್ ನಾಮಪತ್ರ ಸಲ್ಲಿಸಿದ್ದಾರೆ.
Poll (Public Option)

Post a comment
Log in to write reviews